ಕಂದಾಯ ದಾಖಲೆ ಮನೆ ಬಾಗಿಲಿಗೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, ಮಾ.11: ಸಾರ್ವಜನಿಕರಿಗೆ ಕಂದಾಯ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಮೂಲ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮವು ಶನಿವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಹಿಸ್ಸಾ ಸ್ಕೆಚ್, ಆದಾಯ ಪ್ರಮಾಣ ಪತ್ರ ಮತ್ತು […]