ಸಾರ್ವಜನಿಕರಿಗೆ ಕಂದಾಯ ಸೇವೆಗಳು ಸಮರ್ಪಕವಾಗಿ ತಲುಪಬೇಕು: ಶಾಸಕ ರಘುಪತಿ ಭಟ್
ಉಡುಪಿ, ಮಾ.12: ಸಾರ್ವಜನಿಕರಿಗೆ ಕಂದಾಯ ಇಲಾಖೆ ವ್ಯಾಪ್ತಿಯ ಎಲ್ಲಾ ಸೇವೆಗಳನ್ನು ಸಮರ್ಪಕವಾಗಿ, ಮಧ್ಯವರ್ತಿಗಳ ಹಾವಳಿ ಇಲ್ಲದೆ, ಸಕಾಲದಲ್ಲಿ ಒದಗಿಸುವ ಮೂಲಕ, ಕಂದಾಯ ಸಮಸ್ಯೆಗಳನ್ನು ಸಮರ್ಪಕ ರೀತಿಯಲ್ಲಿ ಬಗೆಹರಿಸಲು, ಅಧಿಕಾರಿಗಳು ಪ್ರಾಮಾಣಿಕ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಇಂದು “ಕಂದಾಯ ದಾಖಲೆ ಮನೆ ಬಾಗಿಲಿಗೆ” ಯೋಜನೆಯಡಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ರೈತರ ಮನೆಗಳಿಗೆ, ಕಂದಾಯ ದಾಖಲೆಗಳನ್ನು ಮನೆ ಬಾಗಿಲಿಗೆ ತೆರಳಿ ವಿತರಿಸಿ, ನಂತರ ತೆಂಕನಿಡಿಯೂರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆದ […]