ಫೆ.19ರಂದು ಜಿಲ್ಲೆಯಲ್ಲಿ ಕಂದಾಯ ಸಚಿವರ ಪ್ರವಾಸ
ಉಡುಪಿ: ರಾಜ್ಯದ ಕಂದಾಯ ಸಚಿವ ಆರ್. ಅಶೋಕ್ ಅವರು ಫೆಬ್ರವರಿ 19ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 10.30 ಕ್ಕೆ ಕಾರ್ಕಳದ ಕುಕ್ಕುಂದೂರು ಗ್ರಾಮ ಪಂಚಾಯತ್ ಮೈದಾನದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಕಂದಾಯ ಮೇಳ ಕಾರ್ಯಕ್ರಮ, ಮಧ್ಯಾಹ್ನ 12 ಗಂಟೆಗೆ ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.