ಮಣಿಪಾಲ ಆರ್ ಟಿಒ ಕಚೇರಿಗೆ ಎಸಿಬಿ ದಾಳಿ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರ್ ಟಿಒ ಅಧಿಕಾರಿ ವರ್ಣೇಕರ್
ಉಡುಪಿ: ಬೆಂಕಿಗೆ ಅಹುತಿಯಾದ ಕಾರಿನ ತೆರಿಗೆ ಮರುಪಾವತಿ ಸಂಬಂಧಿಸಿದಂತೆ ಮಾಲೀಕನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಉಡುಪಿ ಉಪ ಸಾರಿಗೆ ಆಯುಕ್ತ ಹಾಗೂ ಜಿಲ್ಲಾ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಆರ್.ಎಂ. ವರ್ಣೇಕರ್ ಮತ್ತು ಸಹಾಯಕ ಮುನಾಫ್ ರೆಡ್ ಹ್ಯಾಂಡ್ ಆಗಿ ಉಡುಪಿ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರ ಖೆಡ್ಡಾಕ್ಕೆ ಬಿದ್ದಿದ್ದಾರೆ. ಕಾರು ಮಾಲೀಕ ಉಡುಪಿಯ ವಿಘ್ನೇಶ್ ಎಂಬುವವರ ದೂರಿನಂತೆ ಇಂದು ಮಧ್ಯಾಹ್ನ ಮಣಿಪಾಲದ ಆರ್ ಟಿಒ ಕಚೇರಿಗೆ ಹಠಾತ್ ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಸಂಭವಿಸಿದ […]