ಪಶುವೈದ್ಯೆ ಅತ್ಯಾಚಾರ: ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಪಂಚಾಯತ್ ರಾಜ್ ಸಂಘಟನೆ ಆಗ್ರಹ
ಉಡುಪಿ: ಪಶುವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಮಾಡಿರುವ ದುಷ್ಕರ್ಮಿಗಳಿಗೆ ಶೀಘ್ರವೇ ಗಲ್ಲುಶಿಕ್ಷೆ ವಿಧಿಸಬೇಕು ಎಂದು ಉಡುಪಿ ಜಿಲ್ಲಾ ರಾಜೀವಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವತಿಯಿಂದ ರಾಷ್ಟ್ರಪತಿಗಳಿಗೆ ಪೋಸ್ಟ್ ಕಾರ್ಡ್ ಬರೆಯುವ ಮೂಲಕ ಆಗ್ರಹಪಡಿಸಲಾಯಿತು. ಉಡುಪಿ ಪ್ರಧಾನ ಅಂಚೆ ಕಚೇರಿ ಎದುರು ಗುರುವಾರ ಹಮ್ಮಿಕೊಂಡ ಪೋಸ್ಟ್ ಕಾರ್ಡ್ ಚಳುವಳಿಯಲ್ಲಿ ಪಂಚಾಯತ್ ರಾಜ್ ಸಂಘಟನೆಯ ಕಾರ್ಯಕರ್ತರು ಕೈಗೆ ಕಪ್ಪುಪಟ್ಟಿ ಧರಿಸಿಕೊಂಡು ಘಟನೆಯ ವಿರುದ್ಧ ಖಂಡನೆ ವ್ಯಕ್ತಪಡಿಸಿದರು. ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ದುಷ್ಕರ್ಮಿಗಳ ತ್ವರಿತ ವಿಚಾರಣೆ ನಡೆಸಿ ಗಲ್ಲುಶಿಕ್ಷೆ […]