ಕ್ರಿಕೆಟ್ ಆಟಗಾರ ರಿಷಭ್ ಪಂತ್ ಬಿಎಂಡಬ್ಲ್ಯು ಕಾರು ಡಿವೈಡರ್‌ಗೆ ಡಿಕ್ಕಿ: ಕಾರಿನಲ್ಲಿ ಬೆಂಕಿ; ಗಂಭೀರ ಗಾಯ

ರೂರ್ಕಿ: ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಯಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ರಿಷಬ್ ಅವರನ್ನು ಮೊದಲು ರೂರ್ಕಿಯ ಸಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರನ್ನು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಮತ್ತು ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಪಂತ್ ತಮ್ಮ ಬಿಎಂಡಬ್ಲ್ಯು ಕಾರನ್ನು ಚಲಾಯಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಅವರು […]