ಬಾಲಿವುಡ್ ನ ಖ್ಯಾತ ನಟ ರಿಷಿ ಕಪೂರ್ ವಿಧಿವಶ

ಉಡುಪಿ: ಬಾಲಿವುಡ್ ನ ಖ್ಯಾತ ನಟ ರಿಷಿ ಕಪೂರ್ (67) ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಬೆಳಿಗ್ಗೆ ನಿಧನರಾದರು. ಅವರು ಕೆಲ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.