ರಸ್ತೆ ಅಪಘಾತ: ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರ
ಬೆಂಗಳೂರು: ರಸ್ತೆ ಅಪಘಾತವಾಗಿ ನಟ ಸಂಚಾರಿ ವಿಜಯ್ ಅವರು ಗಂಭೀರ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಸ್ನೇಹಿತರೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತವಾಗಿದ್ದು, ವಿಜಯ್ ಅವರ ತಲೆ ಹಾಗೂ ತೊಡೆ ಭಾಗಕ್ಕೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡಿದ್ದ ವಿಜಯ್ ಅವರನ್ನು ಕೂಡಲೇ ಅವರನ್ನು ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ಕರೆತಂದ ವೇಳೆ ಅವರ ಸ್ಥಿತಿ ಗಂಭೀರವಾಗಿತ್ತು. ಸ್ಕ್ಯಾನ್ ಮಾಡಿದಾಗ ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವವಾಗುತ್ತಿತ್ತು. ಹೀಗಾಗಿ ಅವರಿಗೆ ಮೆದುಳಿನ ಆಪರೇಷನ್ ಮಾಡಲಾಗಿದೆ. ತೊಡೆ […]