ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ದುರ್ಮರಣ
ಗದಗ: ಕಾರು ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಹಿತ ನಾಲ್ಕು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಗದಗ ರಸ್ತೆಯ ದುಂದೂರ ಕ್ರಾಸ ಬಳಿ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಮೃತರು ಒಂದೇ ಕುಟುಂಬದ ಸಣ್ಣ ಗಂಗಣ್ಣ(52), ನಾಗಮ್ಮ(48), ಈರಣ್ಣ(24) ಹಾಗೂ ಹನಮಂತ (37)ಎಂದು ತಿಳಿದು ಬಂದಿದೆ. ಗಾಯಗೊಂಡ ಸಣ್ಣಈರಣ್ಣ(50) ಮತ್ತು ಲಕ್ಷ್ಮಿ (20)ಎಂಬುವರನ್ನು ಹೆಚ್ಚಿನ ಚಿಕಿತ್ಸೆಗೆ ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಕಾರವಾರಕ್ಕೆ ಚಿಕಿತ್ಸೆಗಾಗಿ ಹೋಗುತ್ತಿದ್ದ ವೇಳೆ ಹುಬ್ಬಳ್ಳಿಯಿಂದ […]