ಸಿನಿಮೀಯ ಮಾದರಿಯಲ್ಲಿ ನಡೆದ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

ಮಂಗಳೂರು: ಅಡ್ಡ ಬಂದ ಸ್ಕೂಟರ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಅಂಗಡಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರಿನ ಪದವಿನಂಗಡಿಯಲ್ಲಿ ನಡೆದಿದೆ. ಮೃತ ಯುವಕನನ್ನು ಬೊಂಡೆಲ್‌ ನ ಕೃಷ್ಣನಗರದ ನಿವಾಸಿ ಪ್ರಶಾಂತ್(30) ಎಂದು ಗುರುತಿಸಲಾಗಿದೆ. ಘಟನೆ ನಡೆದ ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಬೈಕ್ ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೈಕ್ ಡಿಕ್ಕಿಯಾದ ರಭಸಕ್ಕೆ ಸವಾರ ಎಂಟು ಅಡಿಯಷ್ಟು ಎತ್ತರಕ್ಕೆ […]