ವಾರದೊಳಗೆ ಅಪಘಾತ ಪ್ರಕರಣಗಳ ಶಾಶ್ವತ ಪರಿಹಾರ ಕಾರ್ಯಗಳ ವರದಿ ಒಪ್ಪಿಸಿ: ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯಲ್ಲಿ ಈಗಾಗಲೇ 30 ಕ್ಕೂ ಹೆಚ್ಚು ಅಪಘಾತ ವಲಯಗಳನ್ನು ಗುರುತಿಸಲಾಗಿದ್ದು, ರಾಷ್ಟೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗೆ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ತಾತ್ಕಾಲಿಕ ಸುರಕ್ಷತಾ ಸೌಕರ್ಯಗಳ ಕಾರ್ಯಗಳನ್ನು ಕೈಗೊಳ್ಳುವುದರಿಂದ ಮರಣ ಹೊಂದುವಂತಹ ಅಪಘಾತಗಳನ್ನು ತಪ್ಪಿಸಲು ಸಾಧ್ಯ. ಇದಕ್ಕೆ ಹೆಚ್ಚಿನ ಒತ್ತು ನೀಡಿ ಮುಂದಿನ ದಿನಗಳಲ್ಲಿ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಬೇಕು. ಈ ಬಗ್ಗೆ ತೆಗೆದುಕೊಂಡ ಕಾರ್ಯಗಳ ಬಗ್ಗೆ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರಕ್ಕೆ ಅನುಸರಣಾ ವರದಿಯನ್ನು ಒಂದು ವಾರದೊಳಗೆ ನೀಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಅಧಿಕಾರಿಗಳಿಗೆ […]

ಎಂಟು ಆಸನಗಳ ವಾಹನಗಳಲ್ಲಿ ಆರು ಏರ್‌ಬ್ಯಾಗ್ ಕಡ್ಡಾಯ: ನಿತಿನ್ ಗಡ್ಕರಿ

ನವದೆಹಲಿ: ಎಂಟು ಮಂದಿ ಪ್ರಯಾಣಿಸಬಹುದಾದ ಮೋಟಾರು ವಾಹನಗಳ ಕಾರು ತಯಾರಕರು ಕನಿಷ್ಠ ಆರು ಏರ್‌ ಬ್ಯಾಗ್‌ ಒದಗಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ‘ಇಂಟೆಲ್ ಇಂಡಿಯಾ’ಸ್ ಸೇಫ್ಟಿ ಪಯೋನಿಯರ್ಸ್ ಕಾನ್ಫರೆನ್ಸ್ 2022’ ನಲ್ಲಿ ಮಾತನಾಡಿದ ಗಡ್ಕರಿ, ಪ್ರತಿ ವರ್ಷ ದೇಶಾದ್ಯಂತ ಐದು ಲಕ್ಷ ಅಪಘಾತಗಳಲ್ಲಿ ಸುಮಾರು 1.5 ಲಕ್ಷ ಜನರು ಸಾವನ್ನಪ್ಪುತ್ತಾರೆ ಎಂದು ಹೇಳಿದರು. ಏರ್‌ಬ್ಯಾಗ್ ಎನ್ನುವುದು ವಾಹನದ ಪ್ರಯಾಣಿಕರ-ಸಂಯಮ ವ್ಯವಸ್ಥೆಯಾಗಿದ್ದು, ಘರ್ಷಣೆಯ ಸಮಯದಲ್ಲಿ ಚಾಲಕ ಮತ್ತು […]