ಕೆರೆಯಂತಾದ ರಾಜೀವನಗರ ಜಂಕ್ಷನ್: ಸರ್ಕಸ್ ಮಾಡಿಕೊಂಡು ಸಂಚರಿಸಬೇಕಾದ ಅನಿವಾರ್ಯತೆ

ಉಡುಪಿ: 80 ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜೀವನಗರ- ಪ್ರಗತಿನಗರ ಮುಖ್ಯ ರಸ್ತೆಯಲ್ಲಿ ಡಾಂಬರು ಕಿತ್ತುಹೋಗಿ ಬೃಹತಾಕಾರದ ಹೊಂಡಬಿದ್ದಿದ್ದು, ಸಾರ್ವಜನಿಕರು ಆರಾಮಾಗಿ ಸಂಚರಿಸಲು ಸಾಧ್ಯವಾಗದಿರುವಷ್ಟು ದುಸ್ಥಿತಿಗೆ ರಸ್ತೆ ತಲುಪಿದೆ. ರಸ್ತೆಯ ತುಂಬಾ ಕೆಸರು ನೀರು ನಿಂತಿದ್ದು, ವಾಹನ ಸವಾರರು ಸರ್ಕಸ್ ಮಾಡಿಕೊಂಡು ಸಂಚರಿಸುವ ಪರಿಸ್ಥಿತಿ ಎದುರಾಗಿದೆ. ಕೆರೆಯೊಳಗೆ ರಸ್ತೆಯೋ, ರಸ್ತೆಯೊಳಗೆ ಕೆರೆಯೋ ಎನ್ನುವಷ್ಟರ ಮಟ್ಟಿಗೆ ರಸ್ತೆ ಹದಗೆಟ್ಟಿದೆ. ರಾಜೀವನಗರ ಜಂಕ್ಷನ್ ನಲ್ಲಿ ದೊಡ್ಡ ಗುಂಡಿ ನಿರ್ಮಾಣ ಆಗಿದ್ದು, ಮಳೆನೀರು ನಿಂತು ಕೆರೆಯಂತಾಗಿದೆ. ಸಾರ್ವಜನಿಕರು ಓಡಾಡಲು ಪರದಾಡಬೇಕಾದ ಸ್ಥಿತಿ‌ […]

ಕುಸಿದ ಕಾಂಕ್ರೀಟ್ ರಸ್ತೆ; ಪಲ್ಟಿಯಾಗಿ ಹೊಳೆಗೆ ಬಿದ್ದ ಟಿಪ್ಪರ್

ಉಡುಪಿ: ಕಾಂಕ್ರೀಟ್ ರಸ್ತೆ ಕುಸಿದ ಪರಿಣಾಮ ಚಲಿಸುತ್ತಿದ್ದ ಟಿಪ್ಪರೊಂದು ಪಲ್ಟಿಯಾಗಿ ಸಮೀಪದ ಹೊಳೆಗೆ ಬಿದ್ದ ಘಟನೆ ಉಡುಪಿ ಸಮೀಪದ ಕಿದಿಯೂರು ಸಂಕೇಶ್ವರ ರಸ್ತೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಣ್ಣು ತುಂಬಿದ ಟಿಪ್ಪರೊಂದು ಸಂಚರಿಸುತ್ತಿದ್ದಾಗ ಕಾಂಕ್ರೀಟ್ ರಸ್ತೆ ಕುಸಿದು ಪಲ್ಟಿಯಾಯಿತು ಎಂದು ತಿಳಿದುಬಂದಿದೆ. ರಸ್ತೆಯಲ್ಲಿ ಬಿರುಕು ಬಿಟ್ಟಿದ್ದು, ಸಂಪೂರ್ಣವಾಗಿ ಕುಸಿದ ಪರಿಣಾಮ ಟಿಪ್ಪರ್ ಸಮೀಪದ ಕಲ್ಮಾಡಿ ಹೊಳೆಗೆ ಉರುಳಿ ಬಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.  

ಆಕ್ಷೇಪಣೆ ಆಹ್ವಾನ

ಉಡುಪಿ: ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಇವರು ಮಣಿಪಾಲ-ಪೆರಂಪಳ್ಳಿ ರಸ್ತೆಯ 4 ನೇ ಅಡ್ಡ ರಸ್ತೆಯಲ್ಲಿರುವ ಬ್ರಹ್ಮಕುಮಾರಿ ಈಶ್ವರಿ ವಿಶ್ವ ವಿದ್ಯಾಲಯ ಶಾಖಾ ಕಟ್ಟಡಕ್ಕೆ ಹೋಗುವ ರಸ್ತೆಗೆ ಓಂ ಶಾಂತಿ ರಸ್ತೆ ಎಂದು ಹಾಗೂ ಅದಮಾರು ಮಠದ ನರಹರಿ ಪೀಠಮ್ ವ್ಯವಸ್ಥಾಪಕರು ದೀನದಯಾಳ್ ವೃತ್ತ ಚಿತ್ತರಂಜನ್ ಸರ್ಕಲ್‌ನಿಂದ ಹೋಟೆಲ್ ವುಡ್‌ಲ್ಯಾಂಡ್ ಮೂಲಕ ರಥಬೀದಿ ತಲುಪುವ ಮಾರ್ಗಕ್ಕೆ ಶ್ರೀ ಶ್ರೀ ವಿಭುಧಪ್ರಿಯ ಮಾರ್ಗ ಎಂದು ನಾಮಕರಣಗೊಳಿಸಲು ಉದ್ದೇಶಿಸಿರುತ್ತಾರೆ. ಈ ಕುರಿತು ಆಕ್ಷೇಪಣೆ ಅಥವಾ ಸಲಹೆಗಳಿದ್ದಲ್ಲಿ 30 ದಿನಗಳ ಒಳಗೆ ನಗರಸಭಾ […]

ಆಗುಂಬೆ ಘಾಟಿ ವಾಹನ ಸಂಚಾರ ನಿಷೇಧ: ಆದೇಶ ಹಿಂತೆಗೆತ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ರ ಆಗುಂಬೆ ಘಾಟಿಯ ಮೂಲಕ ವಾಹನ ಸಂಚಾರವನ್ನು ಮಾರ್ಚ್ 19 ರಿಂದ 30 ದಿನಗಳ ವರೆಗೆ ನಿಷೇಧಿಸಿ ಮಾರ್ಚ್  7 ರಂದು ಆದೇಶ ಹೊರಡಿಸಲಾಗಿದ್ದು, ಆದರೆ ಕಾರ್ಕಳ, ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ರಕ್ಷಣಾ ತಡೆಗೋಡೆಗಳ ಮರು ನಿರ್ಮಾಣ ಹಾಗೂ ದುರಸ್ಥಿ ಕಾರ್ಯ ಆರಂಭಿಸಲು ಅರಣ್ಯ ಇಲಾಖೆಯ ಮೇಲಾಧಿಕಾರಿಗಳಿಂದ ಸೂಕ್ತ ನಿರ್ದೇಶನದ ಅನುಮತಿ ಪಡೆಯುವುದಾಗಿ ತಿಳಿಸಿರುವುದರಿಂದ ಅನುಮತಿ ದೊರಕುವವರೆಗೂ ಸದ್ರಿ ರಸ್ತೆಯಲ್ಲಿ ವಾಹನಗಳ ಸಂಚಾರ ನಿಷೇಧಿಸಿ ಹೊರಡಿಸಿದ್ದ […]