ಮತ ಎಣಿಕೆ-ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ: ಜಿಲ್ಲಾಧಿಕಾರಿ

ಉಡುಪಿ, ಮೇ 20: ಲೋಕಸಭಾ ಸಾರ್ವತ್ರಿಕ ಚುನಾವಣೆ-2019 ಕ್ಕೆ ಸಂಬಂಧಿಸಿದಂತೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಮೇ 23 ರಂದು ಬ್ರಹ್ಮಗಿರಿಯ ಸೈಂಟ್ ಸಿಸಿಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದ್ದು, ಈ ನಿಟ್ಟಿನಲ್ಲಿ ಅಂದು ಬೆಳಗ್ಗೆ 5 ಗಂಟೆಯಿಂದ ಮತ ಎಣಿಕೆ ಮುಗಿಯುವ ತನಕ ಸದ್ರಿ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ. ಈ ಆದೇಶದನ್ವಯ ಬ್ರಹ್ಮಗಿರಿ ಜಂಕ್ಷನ್‍ನಿಂದ ಅಜ್ಜರಕಾಡು ಎಲ್.ಐ.ಸಿ […]