ರಸ್ತೆ ಸುರಕ್ಷತೆ ಬಗ್ಗೆ ಪ್ರತೀ ತಿಂಗಳು ಸಭೆ: ಜಿಲ್ಲಾಧಿಕಾರಿ
ಉಡುಪಿ: ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ 130 ಅಪಘಾತಗಳು ಸಂಭವಿಸಿದ್ದು, ಜಿಲ್ಲೆಯಲ್ಲಿ ಅಪಘಾತಗಳ ಪ್ರಮಾಣವನ್ನು ತಗ್ಗಿಸುವ ಮತ್ತು ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಮತ್ತು ಈ ಕಾರ್ಯಕ್ರಮಗಳ ಪ್ರಗತಿ ಕುರಿತು ಪ್ರತೀ ತಿಂಗಳು ಸಭೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚನೆ ನೀಡಿದರು. ಅವರು ಬುದವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುವ ಪ್ರತಿಯೊಂದು ಅಪಘಾತಗಳ […]