ಸಾಧಿಸುವ ಛಲವೊಂದಿದ್ದರೆ ವಯಸ್ಸು ಅಡ್ಡಿಯಾಗಲಾರದು ಎಂದು ಜಗತ್ತಿದೆ ಸಾರಿದ ರೋಹನ್ ಬೋಪಣ್ಣ: ಗ್ರ್ಯಾಂಡ್ ಸ್ಲಾಮ್ ಗೆದ್ದ ಅತ್ಯಂತ ಹಿರಿಯ ವ್ಯಕ್ತಿ ಹೆಗ್ಗಳಿಕೆ
ಮೆಲ್ಬರ್ನ್: ಮ್ಯಾಥ್ಯೂ ಎಬ್ಡೆನ್ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ 2024 ಪುರುಷರ ಡಬಲ್ಸ್ ಪ್ರಶಸ್ತಿಯನ್ನು ಗೆದ್ದ ನಂತರ ಭಾರತದ ರೋಹನ್ ಬೋಪಣ್ಣ ಗ್ರ್ಯಾಂಡ್ ಸ್ಲಾಮ್ ಗೆದ್ದ ಅತ್ಯಂತ ಹಿರಿಯ ವ್ಯಕ್ತಿ ಎನಿಸಿಕೊಂಡಿದ್ದು, ಸಾಧನೆಗೆ ವಯಸ್ಸು ಅಡ್ಡಿಯಾಗಲಾರದು ಎನ್ನುವುದನ್ನು ಪ್ರಮಾಣೀಕರಿಸಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ 44 ನೇ ವರ್ಷಕ್ಕೆ ಕಾಲಿಡಲಿರುವ ಬೋಪಣ್ಣ, ಶನಿವಾರ ಮೆಲ್ಬೋರ್ನ್‌ನಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಪುರುಷರ ಡಬಲ್ಸ್ ಇತಿಹಾಸದಲ್ಲಿ ಅತ್ಯಂತ ಹಿರಿಯ ನಂಬರ್ ಒನ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಡ್ ಲೇವರ್ ಅರೆನಾದಲ್ಲಿ ಶ್ರೇಯಾಂಕ […]