ಐಸಿಸಿ ಏಕದಿನ ವಿಶ್ವಕಪ್‌ಗೆ 15 ಸದಸ್ಯರ ತಂಡವನ್ನು ಆಯ್ಕೆ ಮಾಡಿದ BCCI: ಕೆಎಲ್ ರಾಹುಲ್ ಇನ್, ಸಂಜು ಸ್ಯಾಮ್ಸನ್ ಔಟ್

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಹಿರಿಯ ರಾಷ್ಟ್ರೀಯ ಆಯ್ಕೆ ಸಮಿತಿ ಶನಿವಾರ ತಡರಾತ್ರಿ ಮುಂಬರುವ ಐಸಿಸಿ ಏಕದಿನ ವಿಶ್ವಕಪ್‌ಗೆ 15 ಸದಸ್ಯರ ತಂಡವನ್ನು ಆಯ್ಕೆ ಮಾಡಿದೆ, ಸಂಜು ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಪಡೆಯದ ಕಾರಣ ಕೆಎಲ್ ರಾಹುಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಶ್ರೀಲಂಕಾಕ್ಕೆ ತೆರಳಿ ಅಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಅವರನ್ನು ಭೇಟಿ ಮಾಡಿ ತಂಡವನ್ನು ಆಯ್ಕೆ ಮಾಡಿದ್ದಾರೆ. […]

ಮತ್ತೊಮ್ಮೆ ಶತಕ ಪೇರಿಸಿದ ಶುಭಮನ್ ಗಿಲ್: ಭಾರತ ಮತ್ತು ನ್ಯೂಜಿಲೆಂಡ್ ಪಂದ್ಯದಲ್ಲಿ ಗಿಲ್ ಕಮಾಲ್

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೂರು ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಶುಭಮನ್ ಗಿಲ್ ಶತಕ ಸಿಡಿಸಿದ್ದಾರೆ. ಇತ್ತೀಚೆಗಷ್ಟೇ ದ್ವಿಶತಕ ಬಾರಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದ ಗಿಲ್ ಮತ್ತೊಂದು ಶತಕ ಬಾರಿಸುವ ಮೂಲಕ ತಂಡದಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ. ಶುಭಮನ್ ಗಿಲ್ 72 ಎಸೆತಗಳಲ್ಲಿ 100 ರನ್ ಪೂರೈಸಿದರು. ಮೂರನೇ ಏಕದಿನ ಪಂದ್ಯದಲ್ಲಿ ಅವರ ಒಟ್ಟು ಸ್ಕೋರ್ 78 ಎಸೆತಗಳಲ್ಲಿ 112 ರನ್ ಆಗಿತ್ತು. ಈ ವೇಳೆ ಅವರು 5 ಸಿಕ್ಸರ್ ಮತ್ತು 13 ಬೌಂಡರಿಗಳನ್ನು […]

ಐತಿಹಾಸಿಕ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಭಾರತದ ರಾಷ್ಟ್ರಗಾನದ ಉದ್ಘೋಷ: ಭಾವುಕರಾದ ರೋಹಿತ್ ಶರ್ಮಾ

ಮೆಲ್ಬೋರ್ನ್: ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಭಾನುವಾರದಂದು ಐತಿಹಾಸಿಕ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಟಿ20 ವಿಶ್ವ ಕಪ್ ನಲ್ಲಿ ತನ್ನ ಸೂಪರ್ 12 ಪಂದ್ಯದಲ್ಲಿ ಬಾಬರ್ ಅಜಮ್ ನೇತೃತ್ವದ ಪಾಕಿಸ್ತಾನ ತಂಡವನ್ನು ಎದುರಿಸುತ್ತಿದೆ. ಪಂದ್ಯ ಆರಂಭಕ್ಕೂ ಮುನ್ನ ಭಾರತದ ರಾಷ್ಟ್ರಗಾನವನ್ನು ನುಡಿಸಲಾಗಿದ್ದು, ಇಡಿಯ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ರಾಷ್ಟ್ರಭಕ್ತಿಯ ಉದ್ಘೋಷ ರಾಷ್ಟ್ರಗಾನದ ರೂಪದಲ್ಲಿ ಮೊಳಗಿದೆ. ನಾಯಕ ರೋಹಿತ್ ಶರ್ಮಾ ಅವರು ಕೊನೆಯ ಕ್ಷಣದಲ್ಲಿ ಭಾವುಕರಾಗಿದ್ದಾರೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಭಾರತೀಯ […]

ಕೋಹ್ಲಿ ಅಭಿಮಾನಿಯಿಂದ ರೋಹಿತ್ ಶರ್ಮಾ ಬೆಂಬಲಿಗನ ಹತ್ಯೆ: ಟ್ವಿಟರ್ ನಲ್ಲಿ ಅರೆಸ್ಟ್ ಕೊಹ್ಲಿ ಟ್ರೆಂಡ್

ಚೆನ್ನೈ: ಐಪಿಲ್ ಕ್ರಿಕೆಟ್ ನ ಹುಚ್ಚು ಅಭಿಮಾನವು ಯುವಕನೊಬ್ಬನ ಹತ್ಯೆಯಲ್ಲಿ ದುರಂತ ಅಂತ್ಯ ಕಂಡಿದೆ. ತಮಿಳುನಾಡಿನಲ್ಲಿ ರೋಹಿತ್ ಶರ್ಮಾ ಬೆಂಬಲಿಗನನ್ನು ವಿರಾಟ್ ಅಭಿಮಾನಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಘಟನೆಯಲ್ಲಿ 24 ವರ್ಷದ ಪಿ ವಿಘ್ನೇಶ್ ಅನ್ನು ಎಸ್ ಧರ್ಮರಾಜ್ ಎನ್ನುವವನು ಕೊಲೆಮಾಡಿದ್ದಾನೆ. ಈ ಇಬ್ಬರೂ ಅರಿಯಲೂರು ಜಿಲ್ಲೆಯ ಪೊಯ್ಯೂರು ಗ್ರಾಮದವರು. ವಿಘೇಶ್ ಮುಂಬೈ ಇಂಡಿಯನ್ ಅಭಿಮಾನಿಯಾಗಿದ್ದರೆ, ಧರ್ಮರಾಜ್ ಆರ್.ಸಿ.ಬಿಯ ಕಟ್ಟರ್ ಅಭಿಮಾನಿ. ಈ ಇಬ್ಬರೂ ಕೂಡಾ ಮದ್ಯ ಸೇವಿಸಿದ್ದರು. ಆರಂಭಿಕ ತನಿಖೆಯ ಪ್ರಕಾರ, ಇಂಡಿಯನ್ ಪ್ರೀಮಿಯರ್ […]

ವಿರಾಟ್ ಕೊಹ್ಲಿ, ಎಂಎಸ್ ಧೋನಿ ಹಿಂದಿಕ್ಕಿದ ರೋಹಿತ್ ಶರ್ಮಾ: ಟೀಂ ಇಂಡಿಯಾ ನಾಯಕನಾಗಿ 60 ಸಿಕ್ಸರ್‌ ಸಿಡಿಸಿ ದಾಖಲೆ

ಮಂಗಳವಾರ (ಆಗಸ್ಟ್ 2) ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20ಐ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ 60 ಸಿಕ್ಸರ್‌ ಸಿಡಿಸಿ ಹೊಸ ದಾಖಲೆಯನ್ನು ರಚಿಸುವಲ್ಲಿ ಯಶಸ್ವಿಯಾಗಿದ್ದಾರೆ. ನೋವಿನ ಭಯದಿಂದ ನಿವೃತ್ತರಾಗಿ ಮೈದಾನದಿಂದ ಹೊರನಡೆಯುವ ಮೊದಲು ಅವರು ಒಂದು ಬೌಂಡರಿ ಮತ್ತು ಒಂದು ಸಿಕ್ಸರ್ ಅನ್ನು ಸಿಡಿಸಿದ್ದರು. ಮಂಗಳವಾರದ ಪಂದ್ಯದಲ್ಲಿ ಅವರ ಏಕೈಕ ಸಿಕ್ಸರ್‌ನೊಂದಿಗೆ, ಭಾರತದ ನಾಯಕನಾಗಿ ಅವರ ಹೆಸರಿಗೆ ಒಟ್ಟು 60 ಸಿಕ್ಸರ್‌ಗಳು ದಾಖಲಾಗಿವೆ. ಶರ್ಮಾ ಈ ಮಾರ್ಕ್ ತಲುಪಲು 34 ಇನ್ನಿಂಗ್ಸ್ ತೆಗೆದುಕೊಂಡಿದ್ದರೆ, […]