ತಂದೆಯಾದ ರೋಹಿತ್ ಶರ್ಮಾ

ನವದೆಹಲಿ: ಭಾರತ ಟೆಸ್ಟ್ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್‌ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಅವರು ಭಾನುವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ರೋಹಿತ್ ಭಾನುವಾರ ಮುಂಬೈಗೆ ವಾಪಸಾಗಿದ್ದು ಜನವರಿ ಮೂರರಿಂದ ಸಿಡ್ನಿಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್‌ಗೆ ಅಲಭ್ಯರಾಗಿದ್ದಾರೆ. ಜನವರಿ 12ರಂದು ಆರಂಭವಾಗಲಿರುವ ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಯಲ್ಲಿ ಅವರು ಆಡಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.