ಕಾಂಗ್ರೆಸ್ ಕಾರ್ಯಕರ್ತೆಯ ಮೃತದೇಹ ಸೂಟ್‍ಕೇಸ್‍ನಲ್ಲಿ ಪತ್ತೆ!

ರೋಹ್ಟಕ್: ಕಾಂಗ್ರೆಸ್ ಮುಖಂಡ ರಾಹುಲ್‍ಗಾಂಧಿ 2023ರಲ್ಲಿ ನಡೆಸಿದ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಂಡಿದ್ದ 22 ವರ್ಷದ ಕಾಂಗ್ರೆಸ್ ಕಾರ್ಯಕರ್ತೆಯ ಮೃತದೇಹ ಸಂಪ್ಲಾ ಬಸ್ ನಿಲ್ದಾಣ ಬಳಿಯ ಫ್ಲೈಓವರ್ ಪಕ್ಕ ಬಿದ್ದಿದ್ದ ಸೂಟ್‍ಕೇಸ್‍ನಲ್ಲಿ ಶನಿವಾರ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಹಿಳೆಯ ಕೈಗಳಲ್ಲಿ ಮೆಹಂದಿ ವಿನ್ಯಾಸಗಳಿದ್ದು, ಯಾವುದೋ ಸಮಾರಂಭದಲ್ಲಿ ಭಾಗವಹಿಸಿರಬೇಕು ಎನ್ನುವುದನ್ನು ಇದು ಸೂಚಿಸುತ್ತದೆ. ಮಹಿಳೆಯನ್ನು ಉಸಿರುಗಟ್ಟಿಸಿ ಸಾಯಿಸಿ ಸೂಟ್‍ಕೇಸ್‍ನಲ್ಲಿ ತುಂಬಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ. ದಾರಿಹೋಕರು ಶವ ಇದ್ದ ಸೂಟ್‍ಕೇಸ್ ಪತ್ತೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು.ಮೃತ […]