ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆ ಪಾತ್ರ ಮುಖ್ಯ: ನ್ಯಾ. ಶರ್ಮಿಳಾ
ಉಡುಪಿ, ಮಾ.8: ಮಹಿಳೆ ಸಮಾಜದ ಶಕ್ತಿ ಹಾಗೂ ಕುಟುಂಬದ ಕಣ್ಣು. ಸಮಾಜ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆ ಪ್ರಮುಖ ಪಾತ್ರ ವಹಿಸುತ್ತಿದ್ದು, ಇಂದು ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಸಾಧನೆಯ ಛಾಪು ಮೂಡಿಸಿದ್ದಾಳೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಹೇಳಿದರು. ಅವರು ಇಂದು ನಗರದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೌಶಲ್ಯಾಭಿವೃದ್ಧಿ, […]