666 ಕೋಟಿ ರೂ.ಗಳ ಭ್ರಷ್ಟಾಚಾರ: ಮುಖ್ಯಮಂತ್ರಿ ಯಡಿಯೂರಪ್ಪನವರ ರಾಜೀನಾಮೆಗೆ ಸುರ್ಜೇವಾಲಾ ಆಗ್ರಹ

ಬೆಂಗಳೂರು: ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಅವರ ಕುಟುಂಬದ ಸದಸ್ಯರು ಬಿಡಿಎ ನಲ್ಲಿ 666 ಕೋಟಿ ರೂ.ಗಳ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್‌ಸಿಂಗ್‌ ಸುರ್ಜೇವಾಲಾ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮಕ್ಕಳು ಮತ್ತು ಮೊಮ್ಮಕ್ಕಳು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಈ ಕುರಿತು ತಮ್ಮ ಬಳಿ ಸಾಕ್ಷ್ಯ ದಾಖಲೆಗಳಿವೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. […]