ಆರ್‌ಎಸ್‌ಎಸ್‌ ಪಥಸಂಚಲನದಂತೆ ಕಾಂಗ್ರೆಸ್ಸಿಗರಿಗೆ ಖಾದರ್ ತರಬೇತಿ: ವಿಡಿಯೋ ವೈರಲ್

ಮಂಗಳೂರು:  ಗಾಂಧಿ ಜಯಂತಿ ಕಾರ್ಯಕ್ರಮಕ್ಕೆ ಆರ್‌ಎಸ್‌ಎಸ್‌ ಪಥಸಂಚಲನ ಮಾಡುವ ರೀತಿಯೇ ಕಾಂಗ್ರೆಸ್ಸಿಗರಿಗೂ ಮಾಜಿ ಸಚಿವ ಯು.ಟಿ ಖಾದರ್ ತರಬೇತಿ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರೀ ವೈರಲ್ ಆಗಿದೆ. ಗಾಂಧಿ ಜಯಂತಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ನಿಂದ ಭರದ ಸಿದ್ಧತೆಯಾಗುತ್ತಿದ್ದು, ಕಾಂಗ್ರೆಸ್ ಸೇವಾದಳದಿಂದ ಪಥಸಂಚಲನ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ‌ಮಂಗಳೂರು ಹೊರವಲಯದ ಕೋಣಾಜೆ ಪಿಎ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರರಗೆ ಮಾಜಿ ಸಚಿವ ಯು.ಟಿ. ಖಾದರ್ ಪಥಸಂಚಲನ ಅಭ್ಯಾಸ ಮಾಡಿಸುತ್ತಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಪರ […]