ಆರ್‌ಎಸ್‌ಎಸ್ ನಾಯಕ ರುದ್ರೇಶ್ ಕೊಲೆಗಾರ ಮೊಹಮ್ಮದ್ ಘೌಸ್ ನಯಾಜಿ ಬಂಧನ: ದ. ಆಫ್ರಿಕಾದಿಂದ ಭಾರತಕ್ಕೆ ಹಸ್ತಾಂತರ

ನವದೆಹಲಿ: ಬೆಂಗಳೂರಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪದಾಧಿಕಾರಿಯನ್ನು ಕೊಂದ ಆರೋಪಿ ಮೊಹಮ್ಮದ್ ಘೌಸ್ ನಯಾಜಿಯನ್ನು ಬಂಧಿಸಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ನಿಷೇಧಿತ ಉಗ್ರಗಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಕ್ರಿಯ ಸದಸ್ಯ ನಯಾಜಿ 2016ರಲ್ಲಿ ಬೆಂಗಳೂರಿನಲ್ಲಿ ಆರ್‌ಎಸ್‌ಎಸ್ ಮುಖಂಡ ರುದ್ರೇಶ್ ಆರ್ ರನ್ನು ಸಂಚು ರೂಪಿಸಿ ಹತ್ಯೆಗೈದಿದ್ದ. 35 ವರ್ಷದ ರುದ್ರೇಶ್ ಆರ್‌ಎಸ್‌ಎಸ್‌ನ ಶಿವಾಜಿನಗರ ಶಾಖೆಯ ಮಂಡಲ ಅಧ್ಯಕ್ಷ ಮತ್ತು ಬಿಜೆಪಿ ಶಿವಾಜಿನಗರ ಕಾರ್ಯದರ್ಶಿಯಾಗಿದ್ದರು. ಘಟನೆಯ ನಂತರ, […]

ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ ನಿಷೇಧ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸಲಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಸಂವಾದ ನಡೆಸಿದ ಖರ್ಗೆ, ‘ಬಿಜೆಪಿಗೆ ಕಷ್ಟವಾದರೆ ಪಾಕಿಸ್ತಾನಕ್ಕೆ ಹೋಗಲಿ’ ಎಂದು ಹೇಳಿದರು. ಕರ್ನಾಟಕವನ್ನು ಸ್ವರ್ಗವನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ, ಶಾಂತಿ ಕದಡಿದರೆ ಅದು ಭಜರಂಗದಳ ಅಥವಾ ಆರ್‌ಎಸ್‌ಎಸ್ ಎಂದು ಪರಿಗಣಿಸುವುದಿಲ್ಲ, ಕಾನೂನು ಕೈಗೆತ್ತಿಕೊಂಡಾಗ ಬಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಗೆ ನಿಷೇಧ ಹೇರಲಾಗುವುದು ಎಂದು […]

ಕೊಡವೂರು ವಾರ್ಡ್ ರಸ್ತೆಗೆ ಡಾ. ಹೆಡ್ಗೆವಾರ್ ಹೆಸರು

ಉಡುಪಿ: ದೇಶ ಭಕ್ತ ಸಂಘಟನೆಯಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪಕರಾಗಿರುವ ಡಾ.ಕೇಶವ ಬಲಿರಾಮ ಡಾ. ಹೆಡ್ಗೆವಾರ್ ರವರು ದೇಶದ ಎಲ್ಲಾ ಪ್ರಜೆಗಳಿಗೂ ದೇಶ ಭಕ್ತಿಯನ್ನು ಮೂಡಿಸಬೇಕು ಎನ್ನುವ ದೃಷ್ಟಿಯಿಂದ ತನ್ನ ಜೀವನವನ್ನೇ ಈ ದೇಶಕ್ಕೋಸ್ಕರ ಸಮರ್ಪಣೆ ಮಾಡಿರುವ ಕಾರಣ ಇವರ ಹೆಸರನ್ನು ಕೊಡವೂರು ವಾರ್ಡಿನ ಹೊಸ ರಸ್ತೆಗೆ ನಾಮಕರಣ ಮಾಡಲಾಗಿದೆ ಎಂದು ನಗರಸಭೆ ಸದಸ್ಯ ವಿಜಯ್ ಕೊಡವೂರು ಹೇಳಿದರು. ಮಹಾನ್ ವ್ಯಕ್ತಿಯ ಹೆಸರನ್ನು ಕೊಡವೂರು ವಾರ್ಡಿನಲ್ಲಿ ಹೊಸ ರಸ್ತೆಗೆ ನಾಮಕರಣ ಮಾಡುವ ಮೂಲಕ ಅವರ ಜೀವನ […]

ಶಿವಮೊಗ್ಗ: ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ; ಮೂವರ ಬಂಧನ

ಶಿವಮೊಗ್ಗ: ಕೆಲವು ತಿಂಗಳುಗಳ ಹಿಂದೆ ಹಿಂದೂ ಕಾರ್ಯಕರ್ತ ಹರ್ಷನ ಕ್ರೂರ ಹತ್ಯೆಗೆ ಸಾಕ್ಷಿಯಾದ ಶಿವಮೊಗ್ಗದಲ್ಲಿ ಮತ್ತೊಮ್ಮೆ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆಯಾಗಿದೆ. 25 ವರ್ಷದ ಪ್ರಕಾಶ್ ಎಂಬ ಯುವಕನ ಮೇಲೆ ಸೋಮವಾರ ದುಷ್ಕರ್ಮಿಗಳು ಆರ್‌ಎಸ್‌ಎಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ. ಘಟನೆ ನಡೆದಾಗ ಪ್ರಕಾಶ್ ತಮ್ಮ ಮನೆ ಮುಂದೆ ನಿಂತಿದ್ದರು. ಹಲ್ಲೆಗೊಳಗಾದ ಪ್ರಕಾಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾನು ವೀರ ಸಾವರ್ಕರ್ ಬಗ್ಗೆ ಆಯೋಜಿಸಲಾಗಿದ್ದ ಹಿಂದೂ ಸಂಘಟನೆಯೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ, ಆ ಬಳಿಕ […]

ಅಯೋಧ್ಯೆ ಶ್ರೀ ರಾಮ ಚಂದ್ರನ ದಿಗ್ವಿಜಯ ಯಾತ್ರೆಯ ಪೂರ್ವ ತಯಾರಿ ಬೈಠಕ್

ಉಡುಪಿ: ಅಯೋಧ್ಯೆ ಶ್ರೀರಾಮಚಂದ್ರನ ದಿಗ್ವಿಜಯ ಯಾತ್ರೆಯ ಪೂರ್ವ ತಯಾರಿ ಬೈಠಕ್ ಅ. 17 ರಂದು ಅಮೃತ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು. ಅಯೋಧ್ಯೆ ಪ್ರಭು ಶ್ರೀರಾಮಚಂದ್ರನ ದಿಗ್ವಿಜಯ ಯಾತ್ರೆಯು 26 ರಾಜ್ಯಗಳನ್ನು ಸುತ್ತಾಡಿ ಬರುವ ಯಾತ್ರೆಗೆ ಉತ್ತರ ಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾತ್ ಚಾಲನೆಯನ್ನು ನೀಡಿದ್ದು, ಈ ಯಾತ್ರೆಯು ನವಂಬರ್ 7 ರಂದು ಉಡುಪಿ ಜಿಲ್ಲೆಗೆ ಬರಲಿದ್ದು, ಇದಕ್ಕೆ ಪೂರ್ವ ತಯಾರಿಗಾಗಿ ಯೋಚನೆ ಮತ್ತು ಯೋಜನೆಗಾಗಿ ಸಮಿತಿ ರಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಪ್ರಧಾನ […]