ಸಾರಿಗೆ ಇಲಾಖೆ ವತಿಯಿಂದ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ
ಉಡುಪಿ: ಮಾಲಿನ್ಯ ನಿಯಂತ್ರಣ ಮಾಡುವುದರೊಂದಿಗೆ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹೇಳಿದರು. ಶುಕ್ರವಾರದಂದು ನಗರದ ಮಣಿಪಾಲ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರಿಗೆ ಇಲಾಖೆ ವತಿಯಿಂದ ನಡೆದ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ವಾಯುವಿನ ಗುಣಮಟ್ಟ ಉತ್ತಮವಾಗಿದೆ. ಇದಕ್ಕೆ ಮುಖ್ಯ ಕಾರಣ ಇಲ್ಲಿನ ಪರಿಸರದ್ಲಲಿರುವ ಗಿಡ-ಮರಗಳಾಗಿವೆ. ಇವುಗಳನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಂಡು […]