ಬನ್ನಂಜೆ: ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರುದ್ರಯಾಗ ಸಂಪನ್ನ

ಬನ್ನಂಜೆ: ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ದೇವರ ಸನ್ನಿಧಿಯಲ್ಲಿ ಸೋಮವಾರ ದೇವಳದ ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಶತರುದ್ರಾಭಿಷೇಕ, ನವಕ ಪ್ರಧಾನ ಪೂರ್ವಕ-ರುದ್ರಯಾಗ ನಡೆಯಿತು. ಬೆಳ್ಳಿಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, 11 ಗಂಟೆಗೆ ಪೂರ್ಣಾಹುತಿ, ಮಹಾಪೂಜೆ, ಶಿವ ಸನ್ನಿಧಿಯಲ್ಲಿ ನೂರಾರು ಸೀಯಾಳಾಭಿಷೇಕ, ಪಂಚಾಮೃತಾಭಿಷೇಕ, ವಿಶೇಷ ಹೂವಿನ ಅಲಂಕಾರ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾಮ್ ಬನ್ನಂಜೆ, ಅರ್ಚಕ ವಾಸುದೇವ ಉಪಧ್ಯಾಯ, ನಗರಸಭಾ ಸದಸ್ಯೆ ಸವಿತಾ ಹರೀಶ್ ರಾಮ್, ಟಿ ಜಿ ಹೆಗ್ಡೆ, […]

ಅ.31 ರಂದು ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರುದ್ರಯಾಗ

ಬನ್ನಂಜೆ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶ್ರೀ ದೇವರ ಸನ್ನಿಧಿಯಲ್ಲಿ ಅ.31 ಸೋಮವಾರದಂದು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಶತರುದ್ರಾಭಿಷೇಕ, ನವಕ ಪ್ರಧಾನ ಪೂರ್ವಕ ರುದ್ರ ಯಾಗ ನಡೆಯಲಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, 11ಗಂಟೆಗೆ ಪೂರ್ಣಾಹುತಿ ಬಳಿಕ ಮಹಾಪೂಜೆ ನಡೆಯಲಿದ್ದು, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಳದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.