ಗೃಹ ಕಾರ್ಮಿಕರು ಕೋವಿಡ್ ಪರಿಹಾರ ಪಡೆಯಲು ಮಾಲೀಕರ ಸಹಿ ಅಗತ್ಯ
ಉಡುಪಿ: ರಾಜ್ಯದಲ್ಲಿ ಕೋವಿಡ್ -19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಜಾರಿಗೊಳಿಸಿದ ಲಾಕ್‌ಡೌನ್ ಪರಿಣಾಮವಾಗಿ ಸಂಕಷ್ಟಕ್ಕೊಳಗಾದ 11 ವರ್ಗಗಳ ಅಸಂಘಟಿತ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹಕಾರ್ಮಿಕರು, ಟೈಲರ್‌ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿಕಾರ್ಮಿಕ ವೃತ್ತಿಯಲ್ಲಿ ತೊಡಗಿರುವ ಕಾರ್ಮಿಕರಿಗೆ ರಾಜ್ಯ ಸರ್ಕಾರವು 2,000 ರೂ. ಗಳ ಒಂದು ಬಾರಿಯ ನೆರವಿನ ವಿಶೇಷ ಪ್ಯಾಕೇಜ್ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/ ಮೂಲಕ ಜುಲೈ 31 ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ […]