ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ: ಇಡೀ ವಿಶ್ವ ಭಾರತವನ್ನು ಭರವಸೆಯಿಂದ ನೋಡುತ್ತಿದೆ- ಪ್ರಧಾನಿ ಮೋದಿ
ನವದೆಹಲಿ: ದೇಶವ್ಯಾಪಿ ಕೋವಿಡ್ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆನ್ ಲೈನ್ ಮೂಲಕ ಚಾಲನೆ ನೀಡಿದರು. ಬಳಿಕ ದೇಶದ ಜನತೆಯನ್ನುದ್ದೇಶಿ ಮಾತನಾಡಿದ ಅವರು, ಇಡೀ ವಿಶ್ವವೇ ಇಂದು ಭಾರತದ ಕಡೆ ತಿರುಗಿ ನೋಡುತ್ತಿದೆ. ಲಸಿಕೆ ಯಾವಾಗ ದೊರೆಯುತ್ತದೆ ಎಂದು ಎಲ್ಲರೂ ಕೇಳುತ್ತಿದ್ದರು. ಇದೀಗ ಅದು ದೊರೆತಿದೆ. ಈ ಸಂದರ್ಭದಲ್ಲಿ ದೇಶದ ಜನತೆಗೆ ಅಭಿನಂದನೆಗಳನ್ನು ಸಲ್ಲಿಸಲು ಇಚ್ಛಿಸುತ್ತೇನೆ ಎಂದರು. ಲಸಿಕೆ ಬಂತೆಂದು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರಬೇಡಿ. ಮೊದಲ ಡೋಸ್ ನಿಂದ […]