ತೆಂಕನಿಡಿಯೂರು ಗ್ರಾಪಂ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಗ್ರಾಮೀಣ ಕಾಂಗ್ರೆಸ್ ನಿಂದ ಅಭಿನಂದನೆ
ಉಡುಪಿ: ತೆಂಕನಿಡಿಯೂರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಹಾಗೂ ಸ್ಪರ್ಧಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ತೆಂಕನಿಡಿಯೂರು ಗ್ರಾಮೀಣ ಕಾಂಗ್ರೆಸ್ ವತಿಯಿಂದ ಅಭಿನಂದಿಸಲಾಯಿತು. ಅಭ್ಯರ್ಥಿಗಳನ್ನು ಅಭಿನಂದಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿ ಇರದಿದ್ದರೂ ಗ್ರಾಪಂ ಚುನಾವಣೆಯಲ್ಲಿ ಅತಿಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದೆ. ಇದು ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದರು. ಜಿಲ್ಲಾ ಕಾಂಗ್ರೆಸ್ […]