ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಿಡಿಒಗಳ ಹುದ್ದೆಗೆ ಶೀಘ್ರ ನೇಮಕ: ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ
ಬೆಂಗಳೂರು :ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಬಸನಗೌಡ ದದ್ದಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮ ಪಂಚಾಯಿತಿಗಳಿಗೆ 6021 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 5361 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಪಂಚಾಯಿತಿ ಅಭಿವೃದ್ಧಿ (ಪಿಡಿಒ) ಅಧಿಕಾರಿಗಳ ನೇಮಕಾತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಯಲ್ಲಿ ಇಂದು ಭರವಸೆ ನೀಡಿದರು.ಹೈದರಾಬಾದ್ ಕರ್ನಾಟಕಕ್ಕೆ ಅಗತ್ಯವಿರುವ ಹುದ್ದೆಗಳು ಸೇರಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು […]