ಆ.24ರಂದು ಉಡುಪಿಯಲ್ಲಿ “ಗ್ರಾಮೀಣ ಕ್ರೀಡೋತ್ಸವ”

ಉಡುಪಿ: ಈಶ ಫೌಂಡೇಶನ್ ಬೆಂಗಳೂರು ಇದರ ವತಿಯಿಂದ ‘ಗ್ರಾಮೀಣ ಕ್ರೀಡೋತ್ಸವ’ ಇದೇ ಆ. 24ರಂದು ಬೆಳಿಗ್ಗೆ 9ರಿಂದ ಸಂಜೆ 6ಗಂಟೆಯವರೆಗೆ ಉಡುಪಿ ಬ್ರಹ್ಮಗಿರಿಯ ಸೈಂಟ್ ಸಿಸಿಲಿಸ್ ಹೈಸ್ಕೂಲ್ ನಲ್ಲಿ ನಡೆಯಲಿದೆ ಎಂದು ಈಶ ಫೌಂಡೇಶನ್ ನ ಸ್ವಯಂ ಸೇವಕ ಸಭ್ಯತ್ ಶೆಟ್ಟಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಕ್ರೀಡೋತ್ಸವದಲ್ಲಿ ಪುರುಷರಿಗೆ ವಾಲಿಬಾಲ್ ಹಾಗೂ ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಟ ನಡೆಯಲಿದೆ. ಮೊದಲ ಹಂತದ ಕ್ಲಸ್ಟರ್ ಪಂದ್ಯಗಳು ಸೈಂಟ್ ಸಿಸಿಲಿಸ್ ಹೈಸ್ಕೂಲ್ ನಲ್ಲಿ ನಡೆಯಲಿದೆ […]