ಮಂಗಳೂರು: ಕಡಲ್ಕೊರೆತದ ಪ್ರದೇಶಗಳಿಗೆ ಸಚಿವ ಆರ್.ವಿ. ದೇಶಪಾಂಡೆ ಭೇಟಿ
ಮಂಗಳೂರು: ಕೆಲ ದಿನಗಳ ಹಿಂದೆ ವಾಯುಬಾರ ಕುಸಿತದ ಪರಿಣಾಮವಾಗಿ ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡು ಕಡಲ್ಕೊರೆತ ಉಂಟಾದ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಭೇಟಿ ನೀಡಿದರು. ಕಡಲ ತೀರದ ಕೆಲ ಮನೆಗಳಿಗೆ ಹಾನಿಯಾದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲದೇ ಕಡಲ್ಕೊರೆತದಿಂದ ತೊಂದರೆಗೊಳಗಾದ ಜನರಿಗೆ ಹೆಚ್ಚಿನ ಪರಿಹಾರದ ಭರವಸೆ ನೀಡಿದರು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಪ್ರವಾಹ/ಬರ ಪರಿಹಾರ ಕ್ರಮಗಳು ಹಾಗೂ ಕಂದಾಯ ಇಲಾಖಾ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಕಾಪು: ಚಂಡಮಾರುತ ಆಶ್ರಯ ತಾಣ ಉದ್ಘಾಟನೆ
ಉಡುಪಿ, ಜೂನ್ 18: ವಿಶ್ವಬ್ಯಾಂಕ್ ನೆರವಿನಲ್ಲಿ ರಾಷ್ಟ್ರೀಯ ಚಂಡಮಾರುತ ಅಪಾಯ ತಗ್ಗಿಸುವಿಕೆ ಯೋಜನೆಯಡಿಯಲ್ಲಿ ಕಾಪುವಿನಲ್ಲಿ ನಿರ್ಮಾಣಗೊಂಡ ವಿವಿದೋದ್ದೇಶ ಚಂಡಮಾರುತ ಆಶ್ರಯ ತಾಣವನ್ನು ಕಂದಾಯ ಸಚಿವ ಆರ್.ವಿ ದೇಶ್‍ಪಾಂಡೆ ಅವರು ಮಂಗಳವಾರ ಉದ್ಘಾಟಿಸಿದರು. ಕಾಪು ಪಡು ಸರಕಾರಿ ಉನ್ನತ ಪ್ರಾಥಮಿಕ ಶಾಲೆ ಆವರಣದಲ್ಲಿ ಸುಮಾರು 2.45 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಈ ಆಶ್ರಯ ತಾಣದಲ್ಲಿ ಪ್ರಾಕೃತಿಕ ವಿಕೋಪಗಳ ತುರ್ತು ಸಂದರ್ಭಗಳಲ್ಲಿ ನಿರ್ವಸಿತರಾಗುವವರಿಗೆ ಆಶ್ರಯ ಕಲ್ಪಿಸಬಹುದು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, 1999 ರಲ್ಲಿ ಒರಿಸ್ಸಾದಲ್ಲಿ ಉಂಟಾದ ಭೀಕರ ಚಂಡಮಾರುತವು […]
ಜೂನ್ 18: ಜಿಲ್ಲೆಯಲ್ಲಿ ಕಂದಾಯ ಸಚಿವರ ಪ್ರವಾಸ
ಉಡುಪಿ, ಜೂನ್ 15: ರಾಜ್ಯದ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಜೂನ್ 18 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 8 ಗಂಟೆಗೆ ಜಿಲ್ಲೆಯ ಪ್ರವಾಹ /ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಕೈಗೊಂಡ ಪರಿಹಾರ ಕ್ರಮಗಳ ವೀಕ್ಷಣೆ ನಡೆಸುವರು, ಬೆಳಗ್ಗೆ 9.30 ಕ್ಕೆ ಸಾರ್ವಜನಿಕರ ಭೇಟಿ, ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಪ್ರವಾಹ/ ಬರ ಪರಿಹಾರ ಕ್ರಮಗಳು ಹಾಗೂ ಕಂದಾಯ ಇಲಾಖಾ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ, ನಂತರ […]