ನೂರೊಂದು ನೆನಪು ಎದೆಯಾಳದಲ್ಲಿ ಬಿಟ್ಟು ಹೋದ್ರು ಎಸ್ ಪಿ ಬಾಲಸುಬ್ರಹ್ಮಣ್ಯ
ಚೆನ್ನೈ: ನೂರೊಂದು ನೆನಪುಗಳನ್ನು ಅಭಿಮಾನಿಗಳ ಎದೆಯಾಳದಲ್ಲಿ ಅಮರವಾಗಿಸಿ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯ ಅವರು ನಿದ್ದೆ ಜಾರಿದ್ದಾರೆ. ಗಾನ ಗಂಧರ್ವ ಎಂದೇ ಖ್ಯಾತರಾದ ಎಸ್ ಪಿ ಬಾಲಸುಬ್ರಮಣ್ಯಂ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದರು. ಎಸ್ ಪಿಬಿ ಕಳೆದ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. 74 ವರ್ಷದ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾಗಿದ್ದರು. […]