21 ಡಿಸಿಸಿ ಬ್ಯಾಂಕ್ ಗಳಲ್ಲಿ ಮಂಗಳೂರು ಡಿಸಿಸಿ ಬ್ಯಾಂಕ್ ಒಂದನೇ ಸ್ಥಾನದಲ್ಲಿದೆ: ಎಸ್.ಟಿ ಸೋಮಶೇಖರ್
ಮಂಗಳೂರು: ಎಲ್ಲಾ ಕ್ಷೇತ್ರದಲ್ಲಿ ಸಹಕಾರ ಕ್ಷೇತ್ರ ಮುಂಚೂಣಿಯಲ್ಲಿದ್ದು, ಸಹಕಾರ ಕ್ಷೇತ್ರದಲ್ಲಿ ಭಾರತದಲ್ಲಿಯೆ ಕರ್ನಾಟಕ ಎರಡನೇ ಮುಂಚೂಣಿ ರಾಜ್ಯವಾಗಿರುವುದು ನಮ್ಮೆಲ್ಲರ ಹೆಮ್ಮೆ. ಇಲ್ಲಿ ಠೇವಣಿದಾರರ ವಿಶ್ವಾಸ ಉಳಿಸಿಕೊಂಡು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ರಾಜ್ಯ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು. ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ-2022 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ಕ್ಷೇತ್ರ ಜೀವಂತವಾಗಿರುವುದಕ್ಕೆ ಇಲ್ಲಿ ಸೇರಿರುವ ಜನರೇ ಸಾಕ್ಷಿ. ಮಂಗಳೂರು ಭಾಗದಲ್ಲಿ ಸಹಕಾರ ಕ್ಷೇತ್ರ ಗಟ್ಟಿಯಾಗಿದೆ. ಸಹಕಾರ ಕ್ಷೇತ್ರ […]