ಮುಂಡ್ಕೂರು: ಕಾರಿನೊಳಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿ ವ್ಯಕ್ತಿ ಆತ್ಮಹತ್ಯೆ

ಮುಂಡ್ಕೂರು: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆ ಎಂಬಲ್ಲಿ ಗುರುವಾರ 54 ವರ್ಷದ ವ್ಯಕ್ತಿಯೊಬ್ಬರು ಸೀಮೆಎಣ್ಣೆ ಸುರಿದು ಕಾರಿಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಕೃಷ್ಣ ಮೂಲ್ಯ ಎಂದು ಗುರುತಿಸಲಾಗಿದ್ದು, ಆಸ್ತಿ ವಿವಾದವೇ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಬುಧವಾರ ಕೃಷ್ಣ ಅವರ ಸೊಸೆಯ ಮೆಹಂದಿ ಕಾರ್ಯಕ್ರಮ ನಡೆದಿತ್ತು. ಗುರುವಾರ ಮುಂಜಾನೆ 3 ಗಂಟೆ ಸುಮಾರಿಗೆ ಮೃತರು ಕಾರ್ಯಕ್ರಮ ನಡೆಯುತ್ತಿದ್ದ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ […]