ರಾಜಸ್ತಾನ ಕಾಂಗ್ರೆಸ್ ಬಿಕ್ಕಟ್ಟು ಶಮನ: ಕಾಂಗ್ರೆಸ್ ನಲ್ಲೇ ಮುಂದುವರಿಯಲು ಸಚಿನ್ ಪೈಲಟ್ ನಿರ್ಧಾರ

ನವದೆಹಲಿ: ರಾಜಸ್ತಾನ ಕಾಂಗ್ರೆಸ್ ಸರ್ಕಾರದ ಬಿಕ್ಕಟ್ಟು ಬಹುತೇಕ ಬಗೆಹರಿದ್ದು, ಇಂದು ಸೋನಿಯಾ ಗಾಂಧಿ ನಿವಾಸದಲ್ಲಿ ಸಚಿನ್ ಪೈಲಟ್ ಹಾಗೂ ಬಂಡಾಯ ಶಾಸಕರ ಜತೆ ನಡೆದ ಸಂದಾನ ಸಭೆ ಯಶಸ್ವಿಯಾಗಿದೆ. ಆ ಮೂಲಕ ರಾಜಸ್ತಾನ ಕಾಂಗ್ರೆಸ್ ನಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ನಡೆಯುತ್ತಿದ್ದ ರಾಜಕೀಯ ಪ್ರಹಸನಕ್ಕೆ ತೆರೆಬಿದ್ದಿದೆ. ಕಾಂಗ್ರೆಸ್ ವಿರುದ್ಧ ಬಂಡಾಯ ಸಾರಿದ್ದ ಸಚಿನ್ ಪೈಲಟ್ ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಜತೆಗೆ ಚರ್ಚೆ […]

ರಾಜಸ್ಥಾನ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಪೋಟ: ಬಿಜೆಪಿಯತ್ತ ಸಚಿನ್ ಪೈಲೆಟ್?

ಜೈಪುರ: ರಾಜಸ್ಥಾನ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು ಉಂಟಾಗಿದ್ದು, ಕಾಂಗ್ರೆಸ್ನ ಇಬ್ಬರು ಪ್ರಮುಖ ನಾಯಕರ ನಡುವೆ ಭಿನ್ನಮತ ಸ್ಫೋಟಗೊಂಡಿದೆ. ಮಧ್ಯಪ್ರದೇಶದಲ್ಲಿ ಭಿನ್ನಮತ ಉಂಟಾಗಿ ಸರಕಾರ ಪತನಗೊಂಡ ಅನಂತರ ಈಗ ರಾಜಸ್ಥಾನದಲ್ಲಿ ಭಿನ್ನಮತ ಭುಗಿಲೆದ್ದಿದೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಸಚಿನ್ ಪೈಲಟ್ ನಡುವೆ ಎಲ್ಲವೂ ಸರಿಹೋಗದಿರುವುದು ಅಲ್ಲಿನ‌ ಕೆಲವೊಂದು ಬೆಳವಣಿಗೆಗಳಿಂದ ತಿಳಿದುಬಂದಿದೆ. ಈ ಮಧ್ಯೆ ತನ್ನ 8 ಬೆಂಬಲಿತ ಶಾಸಕರೊಂದಿಗೆ ಪೈಲೆಟ್ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಿರ್ಧಾರದ ಬಿಕ್ಕಟ್ಟಿನ ಬಗ್ಗೆ ತಿಳಿಸಲಾಗುವುದು ಎಂದಿದ್ದಾರೆ. ಅಲ್ಲದೇ ಪ್ರಭಾವಿ ನಾಯಕರಾಗಿರುವ […]