ಭೂಗತ ಪಾತಕಿ ಛೋಟಾ ರಾಜನ್ ಕೋವಿಡ್ ಗೆ ಬಲಿ
ನವದೆಹಲಿ: ಜೈಲು ಸೇರಿದ್ದ ಭೂಗತ ಪಾತಕಿ ಛೋಟಾ ರಾಜನ್ ಕೋವಿಡ್–19 ಸೋಂಕಿನಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ರಾಜೇಂದ್ರ ನಿಕಾಲ್ಜೆ ಆಲಿಯಾಸ್ ಛೋಟಾ ರಾಜನ್ ನನ್ನು ಏಪ್ರಿಲ್ 26ರಂದು ಏಮ್ಸ್ ಗೆ ದಾಖಲಿಸಲಾಗಿತ್ತು. ಆತನನ್ನು 2015ರಲ್ಲಿ ಇಂಡೋನೇಷ್ಯಾದಲ್ಲಿ ಬಂಧಿಸಲಾಗಿತ್ತು. ಬಳಿಕ ಭಾರತಕ್ಕೆ ಕರೆತಂದ ಬಳಿಕ ನವದೆಹಲಿಯ ಉನ್ನತ ಭದ್ರತೆಯ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.