ಡಿಸೆಂಬರ್ 11 ರಂದು ಸಾಧಕ ಶಾಲೆ ಮತ್ತು ಸಾಧಕ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ಉಡುಪಿ: ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಉತ್ತಮ ಗುಣಮಟ್ಟದ ಸಾಧನೆಯನ್ನು ಮಾಡಿರುವ ಶಾಲೆ, ಕಾಲೇಜುಗಳನ್ನು ಗುರುತಿಸಿ, ಗೌರವಿಸುವ ಸಾಧಕ ಶಾಲೆ ಮತ್ತು ಸಾಧಕ ಶಿಕ್ಷಕ ಪ್ರಶಸ್ತಿ ಕಾರ್ಯಕ್ರಮವು ಡಿಸೆಂಬರ್ 11 ರಂದು ಮಧ್ಯಾಹ್ನ 2 ಗಂಟೆಗೆ ಉಡುಪಿಯ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದ್ದು, ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್, ಪರ್ಯಾಯ ಮಠಾಧೀಶರು ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ. ಸಾಧಕ ಶಾಲೆ ಪ್ರಶಸ್ತಿ- ಪದವಿಪೂರ್ವ ಕಾಲೇಜು […]