ದುರ್ಗಾ ದೌಡ್ ಗೆ ಸಜ್ಜಾದ ಕೃಷ್ಣ ನಗರಿ: 50 ಸಾವಿರ ಮಿಕ್ಕಿ ಹಿಂದೂ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ

ಉಡುಪಿ: ಹಿಂ.ಜಾ.ವೇ ವತಿಯಿಂದ ಅ.5 ರಂದು ಉಡುಪಿಯಲ್ಲಿ ನಡೆಯಲಿರುವ ದುರ್ಗಾ ದೌಡ್ ಕಾರ್ಯಕ್ರಮಕ್ಕೆ ಭರದ ಸಿದ್ದತೆಗಳು ಜರುಗುತ್ತಿವೆ. ಭೋಪಾಲದ ಸಂಸದೆ, ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮಧ್ಯಾಹ್ನ 2 ಗಂಟೆಗೆ ದಿಕ್ಸೂಚಿ ಭಾಷಣ ನೆರವೇರಿಸಲಿದ್ದಾರೆ. ಕಡಿಯಾಳಿ ಮಹಿಷ ಮರ್ದಿನಿ ದೇವಸ್ಥಾನದಿಂದ ಉಡುಪಿ ಕೃಷ್ಣ ಮಠದವರೆಗೆ ಮೆರವಣಿಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ. ದೂರದ ಊರುಗಳಿಂದ ದುರ್ಗಾ ದೌಡ್ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಕಾರ್ಕಳ, ಕುಂದಾಪುರ, ದ.ಕ ಮುಂತಾದೆಡೆಗಳಿಂದ […]