ಪೌರಕಾರ್ಮಿಕರಿಗೆ ಸರಕಾರದ ಸೌಲಭ್ಯಗಳ ಸಮಗ್ರ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಕೂರ್ಮರಾವ್ ಎಂ
ಉಡುಪಿ: ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ, ಅವರಿಗೆ ಸರ್ಕಾರದ ವಿವಿಧ ಯೋಜನೆಗಳಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮತ್ತು ಅವರು ಕುಟುಂಬದವರಿಗೆ ವಿವಿಧ ಇಲಾಖೆಗಳಲ್ಲಿ ಹಲವು ಸೌಲಭ್ಯಗಳಿದ್ದು, ಈ ಬಗ್ಗೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು […]