ಸಗ್ರಿ ಶ್ರೀ ವಾಸುಕಿ ಸುಬ್ರಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕುಂಭಾಭಿಷೇಕ ಸಂಪನ್ನ

ಉಡುಪಿ: ಸಗ್ರಿ ಶ್ರೀ ವಾಸುಕಿ ಸುಬ್ರಮಣ್ಯ ದೇವಸ್ಥಾನದ ಸನ್ನಿಧಾನದಲ್ಲಿ ಪಾಡಿಗಾರು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಭಾನುವಾರ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವರಿಗೆ ಅಷ್ಟಬಂಧ ಬ್ರಹ್ಮಕುಂಭಾಭಿಷೇಕ ನೆರವೇರಿತು. ಆ ಬಳಿಕ ನೂತನವಾಗಿ ನಿರ್ಮಾಣಗೊಂಡ ಶಿಲಾಮಯ ನಾಗದೇವರ ಸನ್ನಿಧಿಗೆ ಸುವರ್ಣ ಶಿಖರ ಪ್ರತಿಷ್ಠೆ ನಡೆಯಿತು.ಮಧ್ಯಾಹ್ನ ಅಲಂಕಾರ ಪೂಜೆ, ಮಹಾಪೂಜೆ ನೆರವೇರಿತು. ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಮೂರು ಸಾವಿರಕ್ಕೂ ಅಧಿಕ ಮಂದಿ ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದರು.