ತೆಂಕನಿಡಿಯೂರು: ಸಹಾಯ ಸೌಹಾರ್ದ ಸಹಕಾರಿ ನಿಯಮಿತ ಇದರ ನೂತನ ಶಾಖೆ ಉದ್ಘಾಟನೆ
ಉಡುಪಿ: ಮಲ್ಪೆ ತೆಂಕನಿಡಿಯೂರಿನ ಬೃಂದಾವನ ಆರ್ಕೇಡ್ ನಲ್ಲಿ ಸಹಾಯ ಸೌಹಾರ್ದ ಸಹಕಾರಿ ನಿಯಮಿತ ಇದರ 3 ನೇ ಶಾಖೆಯ ಉದ್ಘಾಟನಾ ಸಮಾರಂಭವು ಶುಕ್ರವಾರದಂದು ನಡೆಯಿತು. ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ, ಸಹಕಾರ ಇದ್ದಲ್ಲಿ ಮಾತ್ರ ಸಹಕಾರಿ ಕ್ಷೇತ್ರ ಬೆಳೆಯಲು ಸಾಧ್ಯ. ರಾಜ್ಯದಲ್ಲಿರುವ ಸಹಕಾರಿ ಸಂಸ್ಥೆಗಳು ಒಗ್ಗಟ್ಟಾಗಿ ಬಲಿಷ್ಠವಾಗಿ ಬೆಳೆಯುತ್ತಿದ್ದು ದೇಶಕ್ಕೆ ಮಾದರಿಯಾಗಿವೆ ಎಂದು ಹೇಳಿದರು. ತೊಟ್ಟಂ ಸೈಂಟ್ ಆನ್ಸ್ ಚರ್ಚ್ ನ […]