ಸಾಲಿಗ್ರಾಮ ಪ.ಪಂ: ವಸತಿ ನಿರ್ಮಾಣಕ್ಕೆ ಸಹಾಯಧನ
ಉಡುಪಿ, ಜೂನ್ 4: 2018-19 ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆಯಡಿ ಸರಕಾರದಿಂದ 20 ಮನೆಗಳ ಗುರಿಯನ್ನು ನಿಗದಿಪಡಿಸಲಾಗಿದ್ದು, ಹೊಸ ಮನೆ ನಿರ್ಮಿಸಲು ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವ ವಸತಿ ರಹಿತರು ಮನೆ ನಿರ್ಮಿಸಲು ಸಹಾಯ ಧನ ಪಡೆಯಬಹುದಾಗಿರುತ್ತದೆ. ಆಸಕ್ತರು ಸಂಬಂಧಿಸಿದ ಸೂಕ್ತ ದಾಖಲೆಗಳೊಂದಿಗೆ ಜೂನ್ 30 ರ ಒಳಗೆ ಸಾಲಿಗ್ರಾಮ ಪಟ್ಟಣ ಪಂಚಾಯತ್‍ಗೆ ದಾಖಲೆ ಸಮೀತ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸದ್ದಾರೆ.