ಸಾಲಿಗ್ರಾಮ- ಪ್ಲಾಸ್ಟಿಕ್ ಬಳಸಿದರೆ ಕಠಿಣ ಕ್ರಮ
ಉಡುಪಿ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ಟೋಬರ್ 2 ರಿಂದ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ, ದಾಸ್ತಾನು, ಮಾರಾಟ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಯಾವುದೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ , ದಂಡ ವಿಧಿಸಿ ಜೊತೆಗೆ ಉದ್ದಿಮೆ ಪರವಾನಗಿ ರದ್ದುಪಡಿಸಲಾಗುವುದು. ೩ ತಿಂಗಳ ಜೈಲು ಶಿಕ್ಷೆ ಸಹ ವಿಧಿಸಲಾಗುವುದು . ಸಾರ್ವಜನಿಕರು ಸಹ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ , ಸಾಲಿಗ್ರಾಮ ಪಟ್ಟಣ ಪಂಚಾಯತ್ ನ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.