ಉಡುಪಿ ಜಿಲ್ಲೆಯಲ್ಲಿ ಮಂಗಳವಾರದ ಬದಲು ಭಾನುವಾರ ಸೆಲೂನ್ ಬಂದ್ ಮಾಡಲು ನಿರ್ಧಾರ: ಭಾಸ್ಕರ್ ಭಂಡಾರಿ ಗುಡ್ಡೆಯಂಗಡಿ
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಹಾಗೂ ಭಾನುವಾರ ಸೆಲೂನುಗಳಿಗೆ ಹೆಚ್ಚಿನ ಗ್ರಾಹಕರು ಬರುವುದರಿಂದ ಮುಂದಿನ ದಿನಗಳಲ್ಲಿ ಮಂಗಳವಾರದ ಬದಲು ಭಾನುವಾರ ಸೆಲೂನುಗಳನ್ನು ಬಂದ್ ಮಾಡಲು ಜಿಲ್ಲಾ ಸವಿತಾ ಸಮಾಜ ತೀರ್ಮಾನಿಸಿದೆ. ಮಂಗಳವಾರ ನಡೆದ ಜಿಲ್ಲಾ ಪದಾಧಿಕಾರಿಗಳು ಮತ್ತು ಏಳು ತಾಲೂಕು ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಣಯವನ್ನು ಕೊಳ್ಳಲಾಗಿದೆ. ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಸೆಲೂನುಗಳನ್ನು ಭಾನುವಾರ ಬಂದ್ ಮಾಡಿ, ಮಂಗಳವಾರ ತೆರೆಯಲು ನಿರ್ಧರಿಸಲಾಗಿದೆ ಎಂದು ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಭಾಸ್ಕರ್ […]