ಉಡುಪಿ: ಇಂದು ಪರಿವರ್ತನಾ ಸಮಾವೇಶ
ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಶ್ರಯ, ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಾ. 10ರ ಮಧ್ಯಾಹ್ನ 2.30ಕ್ಕೆ ಕಲ್ಸಂಕ ರಾಯಲ್ಗಾರ್ಡನ್ನಲ್ಲಿ ‘ಜಿಲ್ಲಾ ಮಟ್ಟದ ಪರಿವರ್ತನಾ ಸಮಾವೇಶ’ ನಡೆಯಲಿದೆ. ಲೋಕಸಭೆ ಚುನಾವಣೆಯ ಪೂರ್ವಭಾವಿಯಾಗಿ ಕಾರ್ಯಕರ್ತರಿಗೆ ಸಿದ್ಧತೆ ಮತ್ತು ಪಕ್ಷದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಿಳಿಯಪಡಿಸುವ ಉದ್ದೇಶದಿಂದ ಈ ಸಮಾವೇಶ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಪ್ರಚಾರ ಸಮಿತಿ ಅಧ್ಯಕ್ಷ ಕೆ. […]