ಉಡುಪಿ: ಪೊದಾರ್ ಶಾಲೆಯಲ್ಲಿ ಮಕ್ಕಳ ಸಂಸತ್ತು ಉದ್ಘಾಟನೆ

ಉಡುಪಿ: ಪೊದಾರ್ ಇಂಟರ್‍ನ್ಯಾಷನಲ್ ಶಾಲೆಯಲ್ಲಿ ಮಕ್ಕಳ ಸಂಸತ್ತು ಉದ್ಘಾಟನೆ ಕಾರ್ಯಕ್ರ‌ಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪೂರ್ಣಪ್ರಜ್ಞ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್ ರಾವ್ ಭಾಗವಹಿಸಿ ಮಾತನಾಡಿ, ಮಕ್ಕಳೇ ಮುಂದಿನ ಶಕ್ತಿ. ಆದ್ದರಿಂದ ಮಕ್ಕಳು ಶಿಸ್ತಿನ ಜೀವನ ನಡೆಸಬೇಕು ಎಂದರು. ಶಾಲಾ ಪ್ರಾಂಶುಪಾಲರಾದ ಎಂ.ಎಸ್. ಹೀರೇಮಠ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಶಾಲಾನಾಯಕರು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು ಎಂದರು. ಶಾಲಾ ನಾಯಕನಾಗಿ ಏಳನೇ ತರಗತಿ ವಿದ್ಯಾರ್ಥಿ ದಕ್ಷ್‍ಭಂಡಾರಿ ಹಾಗೂ ಶಾಲಾನಾಯಕಿಯಾಗಿ ದಿಯಾ ಕಾರ್ಣಿಕ್ ಆಯ್ಕೆಯಾದರು. ಶಿಕ್ಷಕಿ ವೇದಾವತಿ […]