ಲಕ್ನೋ: ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪ; ಉದಯನಿಧಿ ಸ್ಟಾಲಿನ್ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್

ಲಕ್ನೋ: ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲು ಸ್ಟಾಲಿನ್ ಕರೆ ನೀಡಿದ್ದಕ್ಕಾಗಿ ಮತ್ತು ಅವರ ಹೇಳಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಪ್ರಿಯಾಂಕ್ ಖರ್ಗೆ ವಿರುದ್ದ ಕೇಸು ದಾಖಲಿಸಲಾಗಿದೆ. ಮಂಗಳವಾರ ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಐಪಿಸಿಯ ಸೆಕ್ಷನ್ 295 […]

ಉದಯನಿಧಿ ಹೇಳಿಕೆಯಿಂದ ಐ.ಎನ್.ಡಿ.ಐ.ಎ ಒಕ್ಕೂಟದ ಹಿಂದೂ ವಿರೋಧಿ ನೀತಿಯ ಅನಾವರಣ: ಯಶ್ ಪಾಲ್ ಸುವರ್ಣ

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಭಾರತದ ಸಾಮಾಜಿಕ ವ್ಯವಸ್ಥೆಯ ಹೆಮ್ಮೆಯ ಪ್ರತೀಕವಾದ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಸಮಸ್ತ ಹಿಂದೂ ಸಮಾಜಕ್ಕೆ ಅವಮಾನಿಸುವ ಮೂಲಕ ಐ.ಎನ್.ಡಿ.ಐ.ಎ ವಿಪಕ್ಷಗಳ ಒಕ್ಕೂಟದ ಹಿಂದೂ ವಿರೋಧಿ ನಿಲುವನ್ನು ಬಹಿರಂಗಪಡಿಸಿದ್ದಾರೆ. ತನ್ನ ಓಟ್ ಬ್ಯಾಂಕ್ ರಾಜಕೀಯಕ್ಕಾಗಿ ನಿರ್ದಿಷ್ಟ ಸಮುದಾಯದ ಓಲೈಕೆಗಾಗಿ ಹಿಂದೂ ದ್ವೇಷಿ ಹೇಳಿಕೆಯ ಮೂಲಕ ಸ್ಟಾಲಿನ್ ಸನಾತನ ಧರ್ಮವನ್ನು ಅಪಮಾನಿಸಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕಿಡಿ ಕಾರಿದ್ದಾರೆ. ಈ ಹಿಂದೆ […]