ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ: ಸಚಿವ ಕೋಟ
ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಜಾತ್ರೆ, ಸಭೆ, ಸಮಾರಂಭ ಹಾಗೂ ಆಚರಣೆಗಳಿಗೆ ನಿಷೇಧ ವಿಧಿಸಿ ಹಾಗೂ ಎಲ್ಲ ರೀತಿಯ ಧಾರ್ಮಿಕ ಆಚರಣೆಗಳನ್ನು ಸಾಂಕೇತಿಕವಾಗಿ ಆಚರಿಸುವಂತೆ ದ.ಕ. ಜಿಲ್ಲಾಡಳಿತ ಆದೇಶಿಸಿ, 144(3) ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜಾತ್ರೆ, ಯಕ್ಷಗಾನ, ನಾಟಕ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಆಯೋಜನೆ ವಿಷಯದಲ್ಲಿ ಸಾರ್ವಜನಿಕರಲ್ಲಿ ನಾನಾ ರೀತಿಯ ಪ್ರಶ್ನೆ ಹಾಗೂ ಗೊಂದಲ ಮೂಡಿತ್ತು. ಇದಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ […]