ಉಡುಪಿ: ಇ-ಸ್ಯಾಂಡ್ ಆ್ಯಪ್, ಮರಳು ಮಿತ್ರ ಆ್ಯಪ್ ಮೂಲಕ ಮರಳು ಲಭ್ಯ

ಉಡುಪಿ: ಜಿಲ್ಲಾ ವ್ಯಾಪ್ತಿಯ ಕುಂದಾಪುರ ತಾಲೂಕು ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಗ್ರಾಮದ ಮರಳು ಬ್ಲಾಕ್ ಸಂಖ್ಯೆ 4, ಹಳ್ನಾಡು, ಜಪ್ತಿ ಗ್ರಾಮದ ಮರಳು ಬ್ಲಾಕ್ ಸಂಖ್ಯೆ 6 ರಲ್ಲಿನ ಮರಳು ಸ್ಟಾಕ್‌ ಯಾರ್ಡ್ನಲ್ಲಿ ಲಭ್ಯವಿರುವ ಮರಳನ್ನು ಸಾರ್ವಜನಿಕರು, ಖಾಸಗಿಯವರು ಮತ್ತು ಸರ್ಕಾರಿ ಕಾಮಗಾರಿಗಳಿಗೆ ಉಡುಪಿ ಇ-ಸ್ಯಾಂಡ್ ಆ್ಯಪ್ ಮೂಲಕ ಹಾಗೂ ಕಾರ್ಯಪಾಲಕ ಅಭಿಯಂತರರು, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವಿಭಾಗ, ಮಂಗಳೂರುರವರಿಗೆ ಸರ್ಕಾರಿ ಕಾಮಗಾರಿಗೆ ಮೀಸಲಿರಿಸಿರುವ ಅಂಪಾರು ಗ್ರಾಮದ ಮರಳು ಬ್ಲಾಕ್ ಸಂಖ್ಯೆ 11 ರಲ್ಲಿ […]

ಮಾನವ ಶ್ರಮದಿಂದ ಮರಳು ತೆರವು: ದಾಖಲೆ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಟೆಂಡರ್ ಕಂ ಹರಾಜು ಮೂಲಕ ಮಾನವ ಶ್ರಮದಿಂದ ಮರಳು ಬ್ಲಾಕ್‌ಗಳನ್ನು ವಿಲೇವಾರಿ ಮಾಡಲು ಜಿಲ್ಲೆಯಲ್ಲಿ ಒಂದು ವರ್ಷದಿಂದ ವಾಸ್ತವ್ಯ ಹೊಂದಿರುವ ಬಗ್ಗೆ ಸಂಬಂಧಪಟ್ಟ ತಾಲೂಕು ತಹಶೀಲ್ದಾರರಿಂದ ವಾಸ ದೃಢೀಕರಣ ಪತ್ರ ಹಾಗೂ ಇತರೆ ಪೂರಕ ದಾಖಲೆಗಳನ್ನು ಹಿರಿಯ ಭೂ ವಿಜ್ಞಾನಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉಡುಪಿ ಕಚೇರಿಗೆ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 20 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂ ವಿಜ್ಞಾನಿ ಯವರ […]

ಮಾನವ ಶ್ರಮದಿಂದ ಮರಳು ಬ್ಲಾಕ್‍ ವಿಲೇವಾರಿಗೆ ಪೂರಕ ದಾಖಲೆ ಸಲ್ಲಿಸಲು ಸೆಪ್ಟಂಬರ್ 12 ಕೊನೆ ದಿನ

ಉಡುಪಿ: ಟೆಂಡರ್ ಕಂ-ಹರಾಜು ಮೂಲಕ ಜಿಲ್ಲೆಯಲ್ಲಿ ಮಾನವ ಶ್ರಮದಿಂದ ಮರಳು ಬ್ಲಾಕ್‍ಗಳನ್ನು ವಿಲೇವಾರಿ ಮಾಡುವ ಸಂಬಂಧ ಜರುಗಿದ, ಜಿಲ್ಲಾ ಮರಳು ಉಸ್ತುವಾರಿ ಉಪಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾದಂತೆ, ಈಗಾಗಲೇ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉಡುಪಿ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾದ ಸಂಭವನೀಯ ಪಟ್ಟಿಯಲ್ಲಿರುವ ತಾತ್ಕಾಲಿಕ ಪರವಾನಿಗೆದಾರರು/ಪರವಾನಿಗೆದಾರರು ಉಡುಪಿ ಜಿಲ್ಲೆಯಲ್ಲಿ ಒಂದು ವರ್ಷದಿಂದ ವಾಸ್ತವ್ಯ ಹೊಂದಿರುವ ಬಗ್ಗೆ ಸಂಬಂಧಪಟ್ಟ ತಾಲ್ಲೂಕು ತಹಶೀಲ್ದಾರರಿಂದ ವಾಸ ದೃಢೀಕರಣ ಪತ್ರವನ್ನು ಪಡೆದು ಹಾಗೂ ಸಾಂಪ್ರಾದಾಯಿಕವಾಗಿ ಮರಳು ತೆರವುಗೊಳಿಸಿರುವ ಬಗ್ಗೆ ಹೊಂದಿರುವ ದಾಖಲಾತಿ/ಪರವಾನಿಗೆ […]

ಕರಾವಳಿ ನಿಯಂತ್ರಣ ವಲಯ ಪ್ರದೇಶ: ಮರಳು ದಿಬ್ಬಗಳ ತೆರವು ಹಾಗೂ ಸಾಗಾಣಿಕೆ ಸಂಪೂರ್ಣ ನಿಷೇಧ

ಉಡುಪಿ: ಉಡುಪಿ ಜಿಲ್ಲಾ ಕರಾವಳಿ ನಿಯಂತ್ರಣ ವಲಯದ ನದಿ ಪಾತ್ರಗಳಲ್ಲಿನ ಮರಳು ದಿಬ್ಬ ತೆರವುಗೊಳಿಸುವ ಸಂಬಂಧ ಒಟ್ಟು 161 ತಾತ್ಕಾಲಿಕ ಮರಳು ಪರವಾನಿಗೆಯನ್ನು ವಿತರಿಸಲಾಗಿರುತ್ತದೆ. ಅವುಗಳಲ್ಲಿ ಕುಂದಾಪುರ ತಾಲ್ಲೂಕು ವ್ಯಾಪ್ತಿಯ 04 ಮರಳು ದಿಬ್ಬಗಳನ್ನು ತೆರವುಗೊಳಿಸಲು ವಿತರಿಸಲಾದ ಒಟ್ಟು 39 ತಾತ್ಕಾಲಿಕ ಮರಳು ಪರವಾನಿಗೆಗಳಿಗೆ ಸಂಬಂಧಿಸಿದಂತೆ KSCZMA ಯಿಂದ ನೀಡಲಾದ ನಿರಾಕ್ಷೇಪಣಾ ಪತ್ರದ ಅವಧಿಯು ದಿನಾಂಕ: 29.03.2022 ರಂದು ಮುಕ್ತಾಯಗೊಂಡಿದ್ದು, ಸದರಿ ಪರವಾನಿಗೆಗಳನ್ನು ಈಗಾಗಲೇ ತಡೆಹಿಡಿಯಲಾಗಿರುತ್ತದೆ ಹಾಗೂ ಸ್ಥಗಿತಗೊಳಿಸಲಾಗಿರುತ್ತದೆ. ಉಡುಪಿ ಮತ್ತು ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಯ ಒಟ್ಟು […]

ಇ-ಸ್ಯಾಂಡ್ ಆ್ಯಪ್ ಮೂಲಕ ಸಾರ್ವಜನಿಕರಿಗೆ ಮರಳು ಪೂರೈಕೆ

ಉಡುಪಿ: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವತಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಸಿ.ಆರ್.ಝಡ್ ಮತ್ತು ನಾನ್ ಸಿ.ಆರ್.ಝಡ್ ಪ್ರದೇಶದ ನದಿ ಪಾತ್ರಗಳಲ್ಲಿ ಮರಳು ತೆರವುಗೊಳಿಸುವ ಕಾರ್ಯ ಕೈಗೊಂಡಿರುವ ಹಿನ್ನೆಲೆ, ಉಡುಪಿ ಇ-ಸ್ಯಾಂಡ್ ಆ್ಯಪ್ ಮೂಲಕ ಮರಳನ್ನು ಸಾರ್ವಜನಿಕರಿಗೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಪೂರೈಸಲಾಗುತ್ತಿದೆ. ಪ್ರಸ್ತುತ ಮರಳು ಸಾಗಾಣಿಕೆ ಕುರಿತು ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗಿರುವ ಹಿನ್ನೆಲೆ, ತಾತ್ಕಾಲಿಕ ಮರಳು ಪರವಾನಿಗೆದಾರರು, ಮರಳು ಗುತ್ತಿಗೆದಾರರು, ವಾಹನ ಮಾಲೀಕರು ಹಾಗೂ ಚಾಲಕರು ರೇನ್ ಟಿ4ಯು ಜಿ.ಪಿ.ಎಸ್ ಸಂಸ್ಥೆಯಿಂದ ಯೂಸರ್ ಐಡಿ ಮತ್ತು ಪಾಸ್‌ವರ್ಡ್ […]