ಮರಳು ವಿತರಣೆಯಲ್ಲಿ ಅಕ್ರಮ ತಡೆಗೆ ಕ್ರಮ ಕೈಗೊಳ್ಳಿ- ಉಡುಪಿ ಜಿ.ಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರ ಒತ್ತಾಯ
ಉಡುಪಿ: ಮರಳು ಮಾರಾಟದಲ್ಲಿ ಯಾವುದೇ ಅಕ್ರಮಗಳಿಗೆ ಆಸ್ಪದವಿಲ್ಲದಂತೆ ಬಡವರಿಗೂ ಕೈಗೆಟುಕುವ ದರದಲ್ಲಿ ಮರಳು ಲಭ್ಯವಾಗುವಂತಾಗಬೇಕು ಎಂಬ ಉದ್ದೇಶದಿಂದ ಆರಂಭವಾಗಿರುವ ಮರಳು ವಿತರಣೆಯಲ್ಲಿ ಅಕ್ರಮಗಳು ತಡೆಯುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ , ಬುಧವಾರ ಉಡುಪಿ ಜಿಲ್ಲಾ ಪಂಚಾಯತ್‍ನಲ್ಲಿ ಬುಧವಾರ, ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಒತ್ತಾಯಿಸಿದರು. ಸಭೆಯಲ್ಲಿ ಮಾತನಾಡಿದ ಸದಸ್ಯ ಬಾಬುಶೆಟ್ಟಿ, ಕುಂದಾಪುರ ತಾಲೂಕಿನಲ್ಲಿ ಮರಳು ಸಾಗಾಣಿಕೆಯಲ್ಲಿ ಅಕ್ರಮಗಳು ನಡೆಯುತ್ತಿವೆ, ಸರಕಾರ ನಿಗಧಿಪಡಿಸಿದ ದರಕ್ಕಿಂತ ಹೆಚ್ಚಿನ ದರದಲ್ಲಿ ಮರಳು ಮಾರಾಟವಾಗುತ್ತಿದ್ದು, […]