ಕಲಬುರಗಿ: ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್ ಕಾನ್ಸ್‌ಟೇಬಲ್ ಮೇಲೆ ಟ್ರ್ಯಾಕ್ಟರ್ ಚಲಾಯಿಸಿ ಹತ್ಯೆ

ಕಲಬುರಗಿ: ಅಕ್ರಮ ಮರಳು ಸಾಗಾಟ ತಡೆಯಲು ಹೋದ ಪೊಲೀಸ್ ಹೆಡ್‌ ಕಾನ್ಸ್‌ಟೇಬಲ್‌ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮೃತಪಟ್ಟ ಸಿಬ್ಬಂದಿ ನೆಲೋಗಿ ಠಾಣೆಯಲ್ಲಿ ನಿಯೋಜಿತರಾಗಿದ್ದರು. 51 ವರ್ಷದ ಎಂ. ಚೌವ್ಹಾಣ್ ಕೊಲೆಯಾದ ಹೆಡ್ ಕಾನ್ಸ್‌ಟೇಬಲ್. ಜೇವರ್ಗಿಯ ನಾರಾಯಣಪುರದ ಸಮೀಪ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ರಾತ್ರಿ ಅಕ್ರಮ ಮರಳು ಸಾಗಾಟದ ಮಾಹಿತಿ ಪಡೆದ ಎಂ. ಚೌವ್ಹಾಣ್ ಸ್ಥಳ ಪರಿಶೀಲನೆಗೆ ಹೋಗಿದ್ದಾರೆ. ಬೈಕ್‌ನಲ್ಲಿ ಹೋಗುತ್ತಿದ್ದ ಎಂ. ಚೌವ್ಹಾಣ್ ಮೇಲೆ ಟ್ರಾಕ್ಟರ್ ಹತ್ತಿಸಿ […]